ಪ್ರಗತಿವಾಹಿನಿ ಸುದ್ದಿ: ಕೋಲ್ಕತ್ತಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆದುರುವ ಬೆನ್ನಲ್ಲೇ ಓಡಿಶಾದಲ್ಲಿ ಅಮಾನುಷ ಘಟನೆಯೊಂದು ನಡೆದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರು ಮಹಿಳಾ ರೋಗಿಗಳ ಮೇಲೆ ವೈದ್ಯನೇ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಒಡಿಶಾದ ಕಟಕ್ ನಲ್ಲಿರುವ ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಸರ್ಕಾರಿ ವೈದ್ಯನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆಯರು ಎಕೊಕಾರ್ಡಿಯೋಗ್ರಾಮ್ ಪರೀಕ್ಷೆಗಾಗಿ ಆಸ್ಪತ್ರೆಯ ಹೃದ್ರೋಗ ವಿಭಾಗಕ್ಕೆ ಬಂದಿದ್ದಾಗ ಇಬ್ಬರ ಮೇಲೆ ವೈದ್ಯ ಅತ್ಯಾಚಾರವೆಸಗಿದ್ದಾನೆ. ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ