Latest

ದ್ವಿತೀಯ ಪಿಯುಸಿ ಫಲಿತಾಂಶ : ಸುರೇಶ ಕುಮಾರ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನೀಡಲು ಸೂಚಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಫಲಿತಾಂಶಗಳನ್ನು ಪರಿಗಣಿಸಿ ಗ್ರೇಡಿಂಗ್ ರೀತಿಯಲ್ಲಿ ಫಲಿತಾಂಶ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

2020-21ರ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಘೋಷಿಸಲು ಪ್ರಥಮ ಪಿಯುಸಿ ಅಂಕ ಹಾಗೂ ಎಸ್.ಎಸ್.ಎಲ್ ಸಿಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕ ಅವಲೋಕಿಸಿ ಮಾರ್ಗದರ್ಶಿ ಸೂತ್ರ ತಯಾರಿಸಲು ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಇದೇ ವೆಳೆ ವೃತ್ತಿಪರ ಕೋರ್ಸ್ ಗಳಿಗೆ ದ್ವಿತೀಯ ಪಿಯುಸಿ ಅಂಕ ಪರಿಗಣಿಸುವಂತಿಲ್ಲ. ಕೇವಲ ಸಿಇಟಿ ಅಂಕ ಮಾತ್ರ ಪರಿಗಣಿಸುವಂತೆ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಮನವಿ ಮಾಡಿದ್ದಾರೆ.

ಪಿಯುಸಿ ಪರೀಕ್ಷೆ ರದ್ದು – ಸುರೇಶ ಕುಮಾರ ಘೋಷಣೆ

Home add -Advt

ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಬೆಂಕಿ; ಮೂರೂ ಅಂತಸ್ಥಿಗೆ ಆವರಿಸಿರುವ ಕೆನ್ನಾಲಿಗೆ

Related Articles

Back to top button