Kannada NewsKarnataka NewsLatest

*ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದು ಇಂಜಿನಿಯರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮದ್ಯದ ನಶೆಯಲ್ಲಿ ಇಂಜಿನಿಯರ್ ಓರ್ವರು ಅಪಾರ್ಟ್ ಮೆಂಟ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್. ಪುರದ ಅಯ್ಯಪ್ಪ ನಗರದಲ್ಲಿ ನಡೆದಿದೆ.

ದಿಪಾಂಶು ಶರ್ಮಾ ಮೃತ ಇಂಜಿನಿಯರ್. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ ಮದ್ಯದ ನಶೆಯಲ್ಲಿಯೇ ಅಪಾರ್ಟ್ ಮೆಂಟ್ ನ 33ನೇ ಫ್ಲೋರ್ ನ ಬಾಲ್ಕನಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

Home add -Advt

ಭರ್ಜರಿ ಪಾರ್ಟಿಯಲ್ಲಿ ಕಂಠಪೂರ್ತಿ ಕುಡಿದು ಬಾಲ್ಕನಿಯಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ನಿಯಂತ್ರಣ ಕಳೆದುಕೊಂಡು ಅಪಾರ್ಟ್ ಮೆಂಟ್ ನಿಂದ ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button