Kannada NewsKarnataka NewsLatest

*ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪ್ರತಿಭಟನೆಗೆ ಸಜ್ಜು: ಸರ್ಕಾರಿ ವೈದ್ಯರಿಂದ ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ*

ಓಪಿಡಿ ಬಂದ್

Home add -Advt

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದು ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮಾರ್ಚ್ 11ರಿಂದ ಪ್ರತಿಭಟನೆ ಮಾಡುವುದಾಗಿ ಘೋಷಿಸಿದೆ. ಸರ್ಕಾರದ ಜೊತೆ ನಡೆದ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಿಂದ 15ರವರೆಗೆ ಒಪಿಡಿ ಬಂದ್ ಮಾಡಿ ಪ್ರತುಭಟಿಸಲಾಗುವುದು. ತುರ್ತು ಸೇವೆ ಮಾತ್ರ ಕಲ್ಪಿಸುವುದಾಗಿ ತಿಳಿಸಿದೆ.

ಸರ್ಕಾರಿ ಆಸ್ಪತ್ರೆಗಳ ವೈದ್ಯರ ಬೇಡಿಕೆಗಳು:
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲ ಕಾಲಕ್ಕೆ ಸಮರ್ಪಕವಾಗಿ ಔಷಧಗಳ ಸರಬರಾಜು.
ವೃಂದ ಮತ್ತ ನೇಮಕಾತಿ ನಿಯಮಗಳನ್ನ ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡುವುದು.
ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನ ಪ್ರಕಟಿಸುವುದು.
ಕಳೆದ ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನ ನೀಡುವುದು.
ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡುವುದು.
ಕೇಂದ್ರ ಪುರಸ್ಕೃತ ಯೋಜನೆಯಡಿ 6 ಸಾವಿರ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡುವುದು.
ಖಾಲಿ ಇರುವ ವೈದ್ಯರು,ಅರೆ ವೈದ್ಯರ ಹುದ್ದೆಯನ್ನ ಕೂಡಲೇ ಭರ್ತಿ ಮಾಡುವುದು.

ಎರಡು ಹಂತಗಳಲ್ಲಿ ವೈದ್ಯರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತವಾಗಿ ಮಾರ್ಚ್ 11ರಿಂದ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿಧರಿಸಿ ಹೊರ ರೋಗಿ (ಓಪಿಡಿ) ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ. ತುರ್ತು ಸೇವೆಗಳು ಮಾತ್ರ ಮುಂದುವರಿಯಲಿವೆ.

ಎರಡನೇ ಹಂತವಾಗಿ ಮಾರ್ಚ್ 16ರಿಂದ ಅನಿರ್ದಿಷ್ಟಾವಧಿವರೆಗೆ ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

Related Articles

Back to top button