Latest
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದ ವೈದ್ಯ; ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಡಾ.ಪೃಥ್ವಿರಾಜ್ (31) ಆತ್ಮಹತ್ಯೆಗೆ ಶರಣಾದ ವೈದ್ಯ. ವೃತ್ತಿಯಲ್ಲಿ ವೈದ್ಯರಾಗಿದ್ದ ಪೃಥ್ವಿರಾಜ್, ಹೃದ್ರೋಗದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ಇದ್ದಕ್ಕಿದ್ದಂತೆ ತಾವು ವಾಸವಾಗಿದ್ದ ಅಪಾರ್ಟ್ ಮೆಂಟ್ ನಿಂದಲೇ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಜಾನೆ 5 ಗಂಟೆ ಸುಮಾರಿಗೆ ಪೃಥ್ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಎಸ್ ಆರ್ ಟಿಸಿ ಬಸ್-ಲಾರಿ ನಡುವೆ ಡಿಕ್ಕಿ; 14 ಪ್ರಯಾಣಿಕರಿಗೆ ಗಾಯ



