ಪ್ರಗತಿವಾಹಿನಿ ಸುದ್ದಿ: ರೋಗಿಗಳನ್ನು ತಪಾಸಣೆ ನಡೆಸಬೇಕಾದ ವೈಧಾಧಿಕಾರಿಯೇ ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ತೆಯಲ್ಲಿ ನಡೆದಿತ್ತು.
ಇದೀಗ ಈ ಪ್ರಕರಣ ಸಂಬಂಧ ಕುಡುಕ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿರಗುಪ್ಪ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಈರಣ್ಣ ಅಮಾನತುಗೊಂಡವರು.
ವೈದ್ಯ ಈರಣ್ಣ ಕಂಠಪೂರ್ತಿ ಕುಡಿದುಬಂದು ಆಸ್ಪತ್ರೆಯಲ್ಲಿ ರೋಗಿಗಳು, ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಸುದ್ದಿ ಪ್ರಸಾರವಾಗಿತ್ತು.
ಕರ್ತವ್ಯ ಲೋಪ ಹಾಗೂ ದುರ್ನಡತೆ ಆಧಾರದ ಮೇಲೆ ಸರ್ಕಾರಿ ಸೇವೆಯಿಂದ ವೈದ್ಯ ಈರಣ್ಣನನ್ನು ಸಸ್ಪೆಂಡ್ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ