*ಕುಡಿದು ಬಂದು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಅಸಭ್ಯ ವರ್ತನೆ: ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ರೋಗಿಗಳನ್ನು ತಪಾಸಣೆ ನಡೆಸಬೇಕಾದ ವೈಧಾಧಿಕಾರಿಯೇ ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ತೆಯಲ್ಲಿ ನಡೆದಿತ್ತು. ಇದೀಗ ಈ ಪ್ರಕರಣ ಸಂಬಂಧ ಕುಡುಕ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿರಗುಪ್ಪ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಈರಣ್ಣ ಅಮಾನತುಗೊಂಡವರು. ವೈದ್ಯ ಈರಣ್ಣ ಕಂಠಪೂರ್ತಿ ಕುಡಿದುಬಂದು ಆಸ್ಪತ್ರೆಯಲ್ಲಿ ರೋಗಿಗಳು, ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಸುದ್ದಿ ಪ್ರಸಾರವಾಗಿತ್ತು. ಕರ್ತವ್ಯ ಲೋಪ ಹಾಗೂ ದುರ್ನಡತೆ ಆಧಾರದ ಮೇಲೆ … Continue reading *ಕುಡಿದು ಬಂದು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಅಸಭ್ಯ ವರ್ತನೆ: ಸಸ್ಪೆಂಡ್*