Karnataka NewsPolitics

*ಬಾಣಂತಿಯರ ಸರಣಿ ಸಾವು: ಐದು ಲಕ್ಷ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ದೇಶವ್ಯಾಪಿ ಸದ್ದು ಮಾಡಿರುವ ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಹೆಚ್ಚಿನ ಪರಿಹಾರದ ಬಗ್ಗೆ ಭರವಸೆ ನೀಡಿದ್ದರು.

ಇದರ ಬೆನ್ನಲ್ಲೇ ಇಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಇದೀಗ ಮತ್ತೆ ರೂ.3 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದರು.

ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಈಗ ಒಟ್ಟು ಐದು ಲಕ್ಷ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button