
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ನಡೆದಿದೆ.
10 ವರ್ಷದ ತರುಣ್ ಮೃತ ಬಾಲಕ. ಬಾಲಕ ತರುಣ್ 15 ದಿನಗಳ ಹಿಂದೆ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾನೆ.
ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ