
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಮಕ್ಕಳು ಸೇರಿದಂತೆ 12 ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಡೆದಿದೆ.
ಇಂದು ಮುಂಜಾನೆ ಹುಚ್ಚುನಾಯಿಯೊಂದು ಗ್ರಾಮದ ಮನೆಗಳಿಗೆ ನುಗ್ಗಿ ಮಕ್ಕಳು, ವೃದ್ಧರು, ಮಹಿಳೆಯರ ಮೇಲೆ ದಾಳಿ ನಡೆಸಿದ್ದು, 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಗ್ರಾಮಸ್ಥರು ಹುಚ್ಚು ನಾಯಿಯನ್ನು ಹಿಡಿದು ಕೊಂದಿದ್ದಾರೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೊಪ್ಪಳದ ಹಲವೆಡೆಗಳಲ್ಲಿ ಬೀದಿನಾಯಿ, ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ