
ಪ್ರಗತಿವಾಹಿನಿ ಸುದ್ದಿ: ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜುಗುತ್ತಿದೆ ಎಂದು ಆರೋಪ ಮಾಡಿ, ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜುಗುತ್ತಿದೆ ಎಂದು ಅವರು ಮಾಡಿದ್ದ ಆರೋಪವನ್ನು ಮಾಂಸ ವ್ಯಾಪಾರಿ ಅಬ್ದುಲ್ ರಜಾಕ್ ತಳ್ಳಿ ಹಾಕಿದ್ದರು. ಈ ಕುರಿತು ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟಿಕರಣ ನೀಡುವುದಾಗಿ ಅವರು ಹೇಳಿದ್ದಾರೆ.
ಈ ಹಿಂದೆಯೂ ಪುನೀತ್ ಕೆರೆಹಳ್ಳಿ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ. ಪರಾರಿಯಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಅಂತಾರಾಜ್ಯ ಮಟ್ಟದ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿದ್ದರು. ಪುನೀತ್ ಕೆರೆಹಳ್ಳಿ ಮತ್ತವರ ತಂಡ ವಸೂಲಿಗಾಗಿ ಈ ರೀತಿಯ ಅಪಪ್ರಚಾರ ನಡೆಸುತ್ತಿದ್ದಾರೆಂದು ಅಬ್ದುಲ್ ರಜಾಕ್ ದೂರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ