
ಪ್ರಗತಿವಾಹಿನಿ ಸುದ್ದಿ: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ ಮುಂದೆ ಭಾರಿ ಸುಂಕಗಳನ್ನು ತೆರಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ರಷ್ಯಾದಿಂದ ತೈಲ ಖರೀದಿ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಇಷ್ಟಾಗಿಯೂ ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರೀ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದಿದ್ದಾರೆ
ಭಾರತ ಮಿತ್ರ ರಾಷ್ಟ್ರ ಪಿಎಂ ಮೋದಿ ಒಳ್ಳೆ ಸ್ನೇಹಿತ. ಖಂಡಿತವಾಗಿಯೂ ಅಮೇರಿಕದ ನಿರ್ಧಾರದ ಜತೆ ಭಾರತ ನಿಲ್ಲುತ್ತದೆ. ಯಾವುದೇ ಕಾರಣಕ್ಕೂ ನಿಯಮಗಳು ಉಲ್ಲಂಘನೆ ಆಗಲ್ಲ. ರಷ್ಯಾದಿಂದ ತೈಲ ಖರೀದಿ ಮಾಡಿದ್ದೇ ಆದ್ರೆ, ತೆರಿಗೆ ನೀತಿಯಲ್ಲಿ ಯಾವುದೇ ರಾಜೀ ಇಲ್ಲವೇ ಇಲ್ಲ ಎಂದು ಟ್ರಂಪ್ ಹೇಳಿದ್ದಾರೆ.