
ಪ್ರಗತಿವಾಹಿನಿ ಸುದ್ದಿ: ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲಿದೆ ಎಂದು ಜಾಗತಿಕಾವಾಗಿ ಹೇಳಿಕೆ ನೀಡಿದ ಅಮೇರಿಕಾಗೆ ಭಾರತ ಬಿಗ್ ಶಾಕ್ ನೀಡಿದೆ. ಅಮೇರಿಕಾ ಹಾಗೂ ಭಾರತದ ನಡುವೆ ಈ ರೀತಿ ಯಾವುದೆ ಮಾತುಕತೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ಧಾನಿ ನರೇಂದ್ರ ಮೋದಿ ನವದೆಹಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೆ ವಿದೇಶಾಂಗ ಸಚಿವಾಲಯ ನಿನ್ನೆ ಇಬ್ಬರು ನಾಯಕರ ನಡುವೆ ಯಾವುದೇ ಸಂಭಾಷಣೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.
ಜಾಗತಿಕ ಇಂಧನ ಅಸ್ಥಿರತೆಯ ನಡುವೆ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವತ್ತ ತನ್ನ ಇಂಧನ ಮೂಲ ನೀತಿಯು ನಿರಂತರವಾಗಿ ಗಮನಹರಿಸುತ್ತಿದೆ ಎಂದು ಸಚಿವಾಲಯ ಪುನರುಚ್ಚರಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಮೋದಿ ಮತ್ತು ಟ್ರಂಪ್ ನಡುವಿನ ಕೊನೆಯ ಫೋನ್ ಸಂಭಾಷಣೆ ಅಕ್ಟೋಬರ್ 9 ರಂದು ನಡೆಯಿತು ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. “ನನ್ನ ಮಾಹಿತಿಯ ಪ್ರಕಾರ, ನಿನ್ನೆ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ನಡುವೆ ಯಾವುದೇ ದೂರವಾಣಿ ಸಂಭಾಷಣೆ ನಡೆದಿಲ್ಲ.
“ಯುಎಸ್‌ಗೆ ಸಂಬಂಧಿಸಿದಂತೆ, ನಾವು ಹಲವು ವರ್ಷಗಳಿಂದ ನಮ್ಮ ಇಂಧನ ಸಂಗ್ರಹಣೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ ದಶಕದಲ್ಲಿ ಇದು ಸ್ಥಿರವಾಗಿ ಪ್ರಗತಿ ಸಾಧಿಸಿದೆ. ಪ್ರಸ್ತುತ ಆಡಳಿತವು ಭಾರತದೊಂದಿಗೆ ಇಂಧನ ಸಹಕಾರವನ್ನು ಗಾಢವಾಗಿಸುವಲ್ಲಿ ಆಸಕ್ತಿ ತೋರಿಸಿದೆ. ಚರ್ಚೆಗಳು ನಡೆಯುತ್ತಿವೆ” ಎಂದು ಜೈಸ್ವಾಲ್ ಹೇಳಿದ್ದಾರೆ.