Latest

ಅಮೆರಿಕಾ ಅಧ್ಯಕ್ಷರ ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಶ್ವೇತಭವನದ ಮೂಲಗಳು ತಿಳಿಸಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಇಬ್ಬರನ್ನೂ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಟ್ರಂಪ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಅವರ ರಕ್ತದ ಆಮ್ಲಜನಕ ಮಟ್ಟ ಕುಸಿಯುತ್ತಿದೆ. ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಟ್ರಂಪ್ ಅವರಿಗೆ ಯಾವುದೇ ಕೊವಿಡ್ ಲಕ್ಷಣಗಳು ಕಂಡುಬಂದಿರಲಿಲ್ಲ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.

Related Articles

Back to top button