ಪ್ರಗತಿವಾಹಿನಿ ಸುದ್ದಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಪೆನ್ಸಿಲ್ವೇನಿಯಾದ ಶನಿವಾರ ಸಂಜೆ ನಡೆದ ಚುನಾವಣಾ ರ್ಯಾಲಿ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು ಅವರ ಮುಖದಿಂದ ರಕ್ತ ಸೋರಿಕೆಯಾಗುತ್ತಿರುವುದು ಕಂಡುಬಂದಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ರ್ಯಾಲಿ ವೇಳೆ ದೊಡ್ಡ ಸ್ಫೋಟ ಶಬ್ದ ಕೇಳಿಬಂದ ನಂತರ ಟ್ರಂಪ್ ನೆಲಕ್ಕೆ ಬಿದ್ದರು. ಕೂಡಲೇ ಭದ್ರತಾ ಸಿಬ್ಬಂದಿ ಟ್ರಂಪ್ ಅವರನ್ನು ರಕ್ಷಿಸಿ ವೇದಿಕೆಯಿಂದ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರು.
ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಘಟನೆಯ ಕೂಲಂಕುಶ ತನಿಖೆ ನಡೆಸಲಾಗುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬ ಸತ್ಯ ತನಿಖೆಯ ನಂತರವಷ್ಟೇ ಹೊರಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ