Latest

ವೈಟ್ ಹೌಸ್ ನ ಬಂಕರ್ ನಲ್ಲಿ ಅಡಗಿ ಕುಳಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಸಾವು ಪ್ರಕರಣದಿಂದಾಗಿ ಅಮೆರಿಕದಲ್ಲಿ ಜನಾಂಗೀಯ ಪ್ರತಿಭಟನೆ ಭುಗಿಲೆದ್ದಿದೆ. ಅಮೆರಿಕ ಅಧ್ಯಕ್ಷರ ಅಧಿಕೃತ ಕಚೇರಿ ಶ್ವೇತಭವನದ ಮುಂದೆ ಭಾರೀ ಪ್ರತಿಭಟನೆ ನಡೆದಿರುವ ಹಿನ್ನಲೆಯಲ್ಲಿ ಭದ್ರತಾ ಸಿಬ್ಬಂದಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವೈಟ್ ಹೌಸ್ ನ ಬಂಕರ್ ನಲ್ಲಿ ಅಡಗಿಸಿಟ್ಟಿರುವ ಘಟನೆ ನಡೆದಿದೆ.

ಜನಾಂಗೀಯ ಪ್ರತಿಭಟನೆ ಅಮೇರಿಕಾದ 15 ಕ್ಕೂ ಹೆಚ್ಚು ರಾಜ್ಯಗಳಿಗೆ ವಿಸ್ತರಿಸಿದೆ. ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

Home add -Advt

ಭಾರೀ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರ ಗುಂಪು, ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆ ಕೂಗಿ ಶ್ವೇತಭವನದ ಬಳಿ ಧಾವಿಸಿ ಆತಂಕ ಸೃಷ್ಟಿಸಿದ್ದಾರೆ. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ವೇತಭವನದ ಸಿಬ್ಬಂದಿ ಭೂಗತ ಬಂಕರ್‌ನಲ್ಲಿ ಕೆಲಕಾಲ ಸುರಕ್ಷಿತವಾಗಿ ಇಟ್ಟಿದ್ದರು.

Related Articles

Back to top button