ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಕೊರೊನಾ ವಿರುದ್ಧ ಹೋರಾಟದಲ್ಲಿ ನಾವು ಭಾರತದ ಜೊತೆಗೆ ಇದ್ದೇವೆ. ನಾವು ವೆಂಟಿಲೇಟರ್ ಗಳನ್ನು ಪೂರೈಕೆ ಮಾಡುತ್ತೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತದಲ್ಲಿ 85 ಸಾವಿರಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯ ಚೀನಾಗಿಂತ ಭಾರತದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಚೀನಾದಲ್ಲಿ ಈಗ 83 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈಗ ಅಮೆರಿಕ ಕೂಡ ಕೊರೊನಾ ವಿರುದ್ಧ ಹೋರಾಟದಲ್ಲಿ ಭಾರತದ ಜೊತೆ ಕೈ ಜೋಡಿಸುವುದಾಗಿ ಘೋಷಣೆ ಮಾಡಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಟ್ರಂಪ್ , ಭಾರತದಲ್ಲಿರುವ ನಮ್ಮ ಸ್ನೇಹಿತರಿಗೆ ಅಮೆರಿಕ ವೆಂಟಿಲೇಟರ್ ಗಳನ್ನು ದಾನ ಮಾಡುತ್ತದೆ ಎಂದು ಘೋಷಿಸಲು ನನಗೆ ಹೆಮ್ಮೆ ಇದೆ. ಈ ಸಾಂಕ್ರಾಮಿಕ ರೋಗದ ಸಮಯದಲ್ಲಿ ನಾವು ಭಾರತ ಮತ್ತು ನರೇಂದ್ರ ಮೋದಿ ಅವರ ಜೊತೆಗೆ ನಿಲ್ಲುತ್ತೇವೆ. ಜೊತೆಗೆ ಕೊರೊನಾಗೆ ಲಸಿಕೆ ತಯಾರಿಸಲು ನಾವು ಭಾರತದ ಜೊತೆ ಸಹಕರಿಸುತ್ತಿದ್ದೇವೆ. ನಾವು ಒಟ್ಟಾಗಿ ಕಣ್ಣಿಗೆ ಕಾಣದ ಶತ್ರುವನ್ನು ಸೋಲಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ