
ಪ್ರಗತಿವಾಹಿನಿ ಸುದ್ದಿ; ಕಾರವಾರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ವಿಶೇಷ ಮುತುವರ್ಜಿಯಿಂದಾಗಿ ಹಾಗೂ ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ಅವರ ಬೇಡಿಕೆಯಂತೆ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೋಂಗ್ರಿ ಸೇತುವೆಯನ್ನು ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡುವುದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ತಾಲೂಕಿನಲ್ಲಿ ರಾಮನಗುಳಿ ಮತ್ತು ಡೋಂಗ್ರಿ ಹಾಗೂ ಇತರೆ ಗ್ರಾಮಗಳ ಜನರು ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಹೋಗಬೇಕಾದಲ್ಲಿ ನಾವೆಯನ್ನು ಆಶ್ರಯಿಸಬೇಕಾಗಿತ್ತು. ಈ ಭಾಗದ ಈ ಸೇತುವೆ ನಿರ್ಮಾಣ ಮಾಡುವುದರಿಂದಾಗಿ ಸುಲಭವಾಗಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಸಂಪರ್ಕ ಸಾಧನವಾಗುತ್ತದೆ ಈ ಮೂಲಕವಾಗಿ ರಾಮನಗುಳಿ ಹಾಗೂ ಡೋಂಗ್ರಿ ಪಂಚಾಯತ ವ್ಯಾಪ್ತಿ ಸಾರ್ವಜನಿಕರ ದಶಕಗಳ ಕನಸು ನನಸಾಗಿದೆ.
ಬೆಳಗಾವಿ ಜಿಲ್ಲೆಗೆ 146 ಕೋಟಿ ರೂ. ಯೋಜನೆಗೆ ಅನುಮೋದನೆ – ಲಕ್ಷ್ಮಣ ಸವದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ