Kannada NewsLatest

ಪ್ರಚೋದನೆಗೆ ಒಳಗಾಗಬೇಡಿ -ಬೆಳಗಾವಿ ಜನರಿಗೆ ಶೆಟ್ಟರ್ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ರಾಷ್ಟ್ರದ ಅಭಿವೃದ್ಧಿಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಪೂರಕವಾಗಿದೆ. ಈ ಕಾಯ್ದೆಯು ಯಾರ ಪೌರತ್ವ ‌ಕಿತ್ತುಕೊಳ್ಳುವುದಿಲ್ಲ. ಇದು ಪೌರತ್ವ ನೀಡುವ ಕಾಯ್ದೆಯಾಗಿದೆ. ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ(ಜ.೨೬) ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. (ಭಾಷಣದ ಪೂರ್ಣ ಪಾಠ ಮತ್ತು ಇನ್ನಷ್ಟು ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ –
ಉಸ್ತುವಾರಿ ಸಚಿವರಿಂದ ಜಿಲ್ಲೆಯ ಇತಿಹಾಸ, ಅಭಿವೃದ್ಧಿ ಯೋಜನೆಗಳ ಅವಲೋಕನ ) ಪೌರತ್ವ ಕಾಯ್ದೆ ಜಾರಿಯಿಂದ ಗಣರಾಜ್ಯೋತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ.

ಬೆಳಗಾವಿ ನಮ್ಮದು:

ಇತ್ತೀಚೆಗೆ ವಿನಾಕಾರಣ ಗಡಿ ವಿಷಯ ಕೆಣಕುವ ಪ್ರಯತ್ನ ನಡೆದಿದೆ. ಇಲ್ಲಿನ ಜನರು ಯಾವುದೇ ಪ್ರಚೋದನೆಗೆ ಒಳಗಾಗದೇ ಎಲ್ಲರೂ ಸೌಹಾರ್ದದಿಂದ ಇರಬೇಕು ಎಂದು ಸಚಿವ ಶೆಟ್ಟರ್ ಹೇಳಿದರು.
ಬೆಳಗಾವಿ ನಮ್ಮದು. ಗಡಿ ವಿವಾದ ಮುಗಿದ ಅಧ್ಯಾಯ. ಬೆಳಗಾವಿ ನಮ್ಮದು; ಕರ್ನಾಟಕಕ್ಕೆ ಸೇರಿದೆ ಎಂದು ಈಗಾಗಲೇ ಸಾರಿ ಸಾರಿ ಹೇಳಿದ್ದೇವೆ ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ,ವಿ.ರಾಜೇಂದ್ರ, ಪೊಲೀಸ್ ಆಯುಕ್ತ ಲೋಕೇಶ್ ಕುಮಾರ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

 

ಉಸ್ತುವಾರಿ ಸಚಿವರಿಂದ ಜಿಲ್ಲೆಯ ಇತಿಹಾಸ, ಅಭಿವೃದ್ಧಿ ಯೋಜನೆಗಳ ಅವಲೋಕನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button