ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಚ್ ಎಂ.ಪಿ. ವೈರಾಣು ಬಗ್ಗೆ  ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ  ಬಂದಿಲ್ಲ. 2001 ರಿಂದಲೇ ಈ ವೈರಾಣು ಪತ್ತೆಯಾಗಿದ್ದು, ಎಚ್.ಎಂ.ಪಿ ವೈರಸ್ … Continue reading ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ