
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ಶನಿವಾರ ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ, ತಾಲೂಕು ಮಟ್ಟದ ಅಧಿಕಾರಿಗಳು, ನಗರಸಭೆ , ಐ.ಎಮ್. ಎ, ರೋಟರಿ ಕ್ಲಬ್, ವಿವಿಧ ಸಂಘ ಸಂಸ್ಥೆಗಳ ಸದಸ್ಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ವಿಶೇಷ ಸಭೆ ನಡೆಸಿ, ಹೆಚ್ಚುವರಿ ಹಾಗೂ ವ್ಯಾಪಕವಾಗಿ ಕೊರೋನಾ ಲಸಿಕೆ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಪ್ರಕಾಶ ಗಾಯಕವಾಡ, ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ ಉಪಾಧ್ಯಕ್ಷರಾದ ನೀತಾ ಬಾಗಡಿ,ಸದಸ್ಯರು, ಅಧಿಕಾರಿಗಳು, ರೋಟರಿ ಕ್ಲಬ್, ಐ.ಎಮ್. ಎ ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ