*ಜಿ.ಬಿ ಸಿಂಡ್ರೋಮ್ ರೋಗದ ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯೂಲೈನ್ ಬೇರಿ ಜಿ.ಬಿ ಸಿಂಡ್ರೋಮ್ ಅಪರೂಪದ ನರ ವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ತಪ್ಪಾಗಿ ದಾಳಿ ಮಾಡುತ್ತದೆ. ಈ ಸ್ಥಿತಿಯು ನರ ದೌರ್ಬಲ್ಯ, ಮರಗಟ್ಟುವಿಕೆ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗಬಹುದು ಈ ರೋಗದ ಲಕ್ಷಣಗಳು ಕೈ ಮತ್ತು ಕಾಲುಗಳಲ್ಲಿ ಪ್ರಾರಂಭವಾಗುವ ದೌರ್ಬಲ್ಯ ದೇಹದ ಮೇಲ್ಭಾಗಕ್ಕೆ ಹರಡುತ್ತದೆ. ಕೈ- ಕಾಲು ಬೆರಳುಗಳ ತುದಿಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಚುಚ್ಚುವ ಸಂವೇದನೆಗಳು, ಮಾತನಾಡುವಾಗ, ಅಗಿಯುವಾಗ ಮತ್ತು ಆಹಾರ ಸೇವಿಸುವಾಗ ತೊಂದರೆ ಆಗುತ್ತದೆ. ತ್ವರಿತ ಹೃದಯ ಬಡಿತ, ರಕ್ತದೊತ್ತಡದ ಏರಿಳಿತಗಳು ಮತ್ತು ತೀವ್ರ ಉಸಿರಾಟದ ತೊಂದರೆ ಕಂಡು ಬರುತ್ತದೆ. ಸಾಮಾನ್ಯವಾಗಿ ಉಸಿರಾಟ ಅಥವಾ ಜೀರ್ಣಾಂಗವ್ಯೂಹದಂತಹ ಸೋಂಕುಗಳಿಂದ ಶರೀರದಲ್ಲಿ ಕ್ಯಾಂಪಿಲೋಬ್ಯಾಕ್ಟರ್ ಜೆಜುನಿ, ಸೈಟೊಮೆಗಾಲೊವೈರಸ್, ಎಪ್ಸ್ಟೀನ್-ವೈರಸ್ ಮುಂತಾದ ವೈರಸ್ಗಳು ಮನುಷ್ಯನ ಶರೀರಕ್ಕೆ ಅಂಟಿಕೊಂಡು ತೊಂದರೆಮಾಡುತ್ತದೆ.
ಈ ಪ್ರಕರಣಕ್ಕೆ ಯಾರು ಭಯ ಪಡದೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡು ಸಂಪೂರ್ಣವಾಗಿ ಗುಣಮುಖರಾಗಬಹುದು ಇದಕ್ಕೆ ಸಂಬಂಧಿಸಿದಂತೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಿ ಹಾನಿಕಾರಕ ಪ್ರತಿಕಾಯಗಳನ್ನು ತೆಗೆದುಹಾಕಬಹುದು ಮತ್ತು ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್ ಚಿಕಿತ್ಸೆಯು ಲಭ್ಯವಿರುತ್ತದೆ. ಸುರಕ್ಷಿತ ಕುಡಿಯುವ ನೀರು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸಿ, ತಿನ್ನುವ ಮೊದಲು ಮತ್ತು ಶೌಚಾಲಯವನ್ನು ಬಳಸಿದ ನಂತರ ಕೈ-ಗಳನ್ನು ತೊಳೆಯಿರಿ ಸಮಾಜಕ್ಕೆ ಭಯಹುಟ್ಟಿಸುವ ತಪ್ಪು ಮಾಹಿತಿಯನ್ನು ಹರಡಬೇಡಿ ಎಂದು ತಿಳಿಸಿದರು.
ಈಗಾಗಲೇ ನಮ್ಮ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಿ.ಬಿ ಸಿಂಡ್ರೋಮ್ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿಯನ್ನು ನೀಡುತ್ತಿದ್ದಾರೆ. ಸಂಶಯಾಸ್ಪದ ಪ್ರಕರಣಗಳು ಕಂಡು ಬಂದಲ್ಲಿ ಸಮೀಪದ ಸರಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಎಂದು ಮಾನ್ಯರು ತಿಳಿಸಿದರು.
ಈಗಾಗಲೇ ಬೇಸಿಗೆ ಪ್ರಾರಂಭವಾಗಿರುವುದರಿಂದ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಮೂಲಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಕ್ಷೀಸಿ ವರದಿಯನ್ನು ಸಲ್ಲಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ಗಡೇದ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೇವಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಗೀತಾ ಕಾಂಬಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈಧ್ಯಾಧೀಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ