
ಪ್ರಗತಿವಾಹಿನಿ ಸುದ್ದಿ: ಎಸ್.ಆರ್.ಎಸ್ ಟ್ರಾವೆಲ್ಸ್ ಬಸ್ ಪಾರ್ಕಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಜೋಡಿ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಹೊರವಲಯದ ಸಿಂಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಬ್ಬಿಣದ ರಾಡ್ ನಿಂದ ಹೊಡೆದು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಗೇಶ್ (55) ಹಾಗೂ ಮಂಜುನಾಥ್ (50) ಮೃತರು. ಇಬ್ಬರೂ ಎಸ್.ಆರ್.ಎಸ್ ಬಸ್ ಸರ್ವಿಸ್ ಸಿಬ್ಬಂದಿ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಾಗಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ