*ರಾಜ್ಯಪಾಲ ಗೆಹ್ಲೋಟ್ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ, ಪತ್ನಿ ಮೇಲೆ ಹಲ್ಲೆ ಆರೋಪ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಇತ್ಯಾದಿ ಆರೋಪಗಳನ್ನು ಹೊರಿಸಿದ್ದಾಳೆ.
ದಿವ್ಯಾ ತನ್ನ ಪತಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನಿಯಾಗಿದ್ದು, ಹಲವಾರು ಅಕ್ರಮ ಸಂಬಂಧಗಳನ್ನು ಹೊಂದಿದ್ದರು ಎಂದು ಆರೋಪಿಸಿದ್ದಾರೆ. ಒಮ್ಮೆ ಅವರು ಕುಡಿದು ಮನೆಗೆ ಬಂದು ₹50 ಲಕ್ಷ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ್ದರು, ನಂತರ ಛಾವಣಿಯಿಂದ ತಳ್ಳಿ ಗಂಭೀರವಾಗಿ ಗಾಯಗೊಳಿಸಿದ್ದರು ಎಂದು ಆರೋಪಿಸಿದ್ದಾರೆ.
ಉಜ್ಜಯಿನಿ ಜಿಲ್ಲೆಯ ನಾಗ್ದಾದಲ್ಲಿ ತನ್ನ ಅತ್ತೆ-ಮಾವಂದಿರು ಬಲವಂತವಾಗಿ ಮಗುವನ್ನು ಇರಿಸಿಕೊಂಡಿದ್ದಾರೆ. ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ತನ್ನ 4 ವರ್ಷದ ಮಗಳನ್ನು ಸುರಕ್ಷಿತವಾಗಿ ಹಿಂದಿರುಗಿಸುವಂತೆ ಕೋರಿ ದಿವ್ಯಾ ಲಿಖಿತ ದೂರು ಸಲ್ಲಿಸಿದ್ದಾರೆ
ದಿವ್ಯಾ ಅವರ ಪ್ರಕಾರ, ಅವರ ಪತಿ ದೇವೇಂದ್ರ ಗೆಹ್ಲೋಟ್ (33), ಮಾವ ಜಿತೇಂದ್ರ ಗೆಹ್ಲೋಟ್ (55), ಅಲೋಟ್ನ ಮಾಜಿ ಶಾಸಕ, ಸೋದರ ಮಾವ ವಿಶಾಲ್ ಗೆಹ್ಲೋಟ್ (25), ಮತ್ತು ಅಜ್ಜಿ ಅನಿತಾ ಗೆಹ್ಲೋಟ್ (60) ಅವರು 50 ಲಕ್ಷ ರೂಪಾಯಿ ವರದಕ್ಷಿಣೆ ಬೇಡಿಕೆಯ ಮೇರೆಗೆ ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಜೋಡಿ ಏಪ್ರಿಲ್ 29, 2018 ರಂದು ಮುಖ್ಯಮಂತ್ರಿಗಳ ಕನ್ಯಾದಾನ ಯೋಜನೆಯಡಿಯಲ್ಲಿ ವಿವಾಹವಾಗಿದ್ದರು. ಆಗಿನ ಕೇಂದ್ರ ಸಚಿವ ಮತ್ತು ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಹಿರಿಯ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮದುವೆ ಬಳಿಕ ಆಕೆಯ ಪತಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನಿಯಾಗಿದ್ದಾನೆ ಮತ್ತು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾನೆಂದು ತಿಳಿದುಬಂದಿದೆ. ದೈಹಿಕ ಹಿಂಸೆ, ಮಾನಸಿಕ ಹಿಂಸೆ ಮತ್ತು ವರದಕ್ಷಿಣೆ ಮೊತ್ತಕ್ಕೆ ಬೇಡಿಕೆ ಇಟ್ಟು ಪದೇ ಪದೇ ನಿಂದಿಸುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.
ಜನವರಿ 26 ರಂದು ತನ್ನ ಪತಿ ಕುಡಿದು ಮನೆಗೆ ಹಿಂತಿರುಗಿದಾಗ ಕ್ರೂರವಾಗಿ ಹಲ್ಲೆ ನಡೆಸಿ, “ಇಂದು ಹಣ ತರದಿದ್ದರೆ, ನಿನ್ನನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ದಿವ್ಯಾರನ್ನು ಮೇಲ್ಛಾವಣಿಯಿಂದ ತಳ್ಳಿದ್ದಾನಂತೆ. ಕೆಳಗೆ ಬಿದ್ದು ಬೆನ್ನುಮೂಳೆ, ಭುಜ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿದಾರು ರಾತ್ರಿಯಿಡೀ ತನಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


