CrimeKannada NewsKarnataka NewsLatest

*ವರದಕ್ಷಿಣೆ ಕಿರುಕುಳ: ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ನಿವಾಸಿಯಾಗಿದ್ದ ಕಾವ್ಯ, ಮದುವೆಯಾದ ಬಳಿಕ ಪತಿ ನವೀನ್ ಜೊತೆ ನೆಲಮಂಗಲದ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು.

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗದ ಕಾರಣ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೇ ಪತಿ ಹಾಗೂ ಕುಟುಂಬದವರು ಕಾವ್ಯಾಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಈ ಎಲ್ಲಾ ವಿಚಾರಕ್ಕೆ ಮನನೊಂದ ಕಾವ್ಯ, ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

Home add -Advt

Related Articles

Back to top button