
ಸರ್ಕಾರದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಾರ್ಯವೈಖರಿ ಹಾಗೂ ಸರ್ಕಾರದ ಕೆಲಸಗಳನ್ನು ಬಿಜೆಪಿ ನಾಯಕ, ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ್ ಶ್ಲಾಘಿಸಿದ ಪ್ರಸಂಗ ನಡೆದಿದೆ.
ಸದಾಕಾಲ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹಾಡಿ ಹೊಗಳಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂನ ಶಿರೂರು ಮೈದಾನದಲ್ಲಿ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶ್ವತ್ಥನಾರಾಯಣ, ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವ ಮೂಲಕ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವೃದ್ಧರಿಗೆ, ಶಾಲಾಮಕ್ಕಳ ಓಡಾಟಕ್ಕೆ ಇದ್ದ ತೊಂದರೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಲಿ ಎಂದು ಶುಭ ಹಾರೈಸಿದರು.
ಬಡವರಿಗೆ ವಸತಿ ನೀಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿ, ಆಸ್ತಿ ತೆರಿಗೆ ಹೆಚ್ಚಳದ ಸಮಸ್ಯೆ, ಪರಿಷ್ಕೃರಣೆ ಮತ್ತು ರಸ್ತೆ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸಿ ಎಂದು ಡಾ.ಎ.ಎನ್. ಅಶ್ವಥ್ ನಾರಾಯಣ ಅವರು ಮನವಿ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ