Belagavi NewsBelgaum News
*ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ: ಮಾ.17 ರಂದು ಪೂರ್ವಭಾವಿ ಸಿದ್ಧತಾ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರೀಲ್ 5, 2025 ರಂದು ಡಾ. ಬಾಬು ಜಗಜೀವನ ರಾಮ ಹಾಗೂ ಏಪ್ರೀಲ್ 14, 2025 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 17, 2025 ರಂದು ಜಿಲ್ಲಾ ಪಂಚಾಯತ ಸಭಾಂಗಣ 1ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಿಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ 12 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಗೆ ವಿವಿಧ ಪ.ಜಾತಿ/ವರ್ಗಗಳ ಹಾಗೂ ಇತರೆ ಸಂಘಟನೆಗಳ ಮುಖಂಡರು/ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಜಯಂತಿ ಆಚರಣೆಗೆ ಸೂಕ್ತ ಸಲಹೆಗಳನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.