Cancer Hospital 2
Beereshwara 36
LaxmiTai 5

ಡಾ. ಬಾಲಾಜಿ ಆಳಂದೆ ಹೃದಯಾಘಾತದಿಂದ ನಿಧನ

Anvekar 3

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಬಾಲಾಜಿ ಡಿ. ಆಳಂದೆ ಅವರು ಇಂದು (೦೭-೦೮-೨೦೨೩) ಬೆಳಗ್ಗೆ ೮.೧೫ಕ್ಕೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

Emergency Service

ಇವರು ಮೂಲತಃ ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಹುಪ್ಲ ಗ್ರಾಮದವರು. ಕಳೆದ ಹದಿನಾಲ್ಕು ವರ್ಷಗಳಿಂದ ಈ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯ್ ನಾಗಣ್ಣವರ್, ಕುಲಸಚಿವರಾದ ರಾಜಶ್ರೀ ಜೈನಾಪುರ, ಮೌಲ್ಯ ಮಾಪನ ಕುಲಸಚಿವರಾದ ಪ್ರೊ. ಶಿವಾನಂದ ಗೋರನಾಳೆ, ವಿತ್ತಾಧಿಕಾರಿ ಪ್ರೊ. ಎಸ್. ಬಿ.ಆಕಾಶ್ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್ ಎಸ್ ತೇರದಾಳ ಅವರ ನೇತೃತ್ವದಲ್ಲಿ ಬೋಧಕ- ಬೋಧಕೇತರ ಮತ್ತು ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

Bottom Add3
Bottom Ad 2