Kannada NewsKarnataka NewsLatestPolitics

*ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ “ಲೋಕನಾಯಕ” ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು.

ಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷರಾಗಿದ್ದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.

Home add -Advt

ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಆಂಧ್ರ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಅಧಿಕ ಮಹಾಸ್ವಾಮಿಗಳು ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ನೂರಕ್ಕೂ ಹೆಚ್ಚು ಹಾಲಿ, ಮಾಜಿ ಸಚಿವರು, ಶಾಸಕರು, ನಾಯಕರುಗಳು ಉಪಸ್ಥಿತರಿದ್ದರು.‌

Related Articles

Back to top button