Latest

*2 ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತಾರಾ ಡಾ.ಜಿ.ಪರಮೇಶ್ವರ್?; ಮಾಜಿ ಡಿಸಿಎಂ ನೀಡಿದ ಸ್ಪಷ್ಟನೆಯೇನು?*

ಪ್ರಗತಿವಾಹಿನಿ ಸುದ್ದಿ; ತುಮಕೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಬಯಸಿರುವ ನಡುವೆಯೇ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಕೂಡ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಜಿ.ಪರಮೇಶ್ವರ್ ಅವರೇ ಈಗ ಸ್ಪಷ್ಟನೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕಾಷೇತ್ರದಲ್ಲಿ ಮಾತ್ರ ನಾನು ನಿಲ್ಲುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಎರಡು ಕ್ಷೇತ್ರದ ಗೊಂದಲ ಯಾಕೆ ಬಂತು ಎಂಬುದೂ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಕ್ಕಿ ಕೊಡದಿದ್ದರೆ ಜನರು ಇಂದು ಊಟ ಮಾಡಲು ಕೂಡ ಸಾಧ್ಯವಗುತ್ತಿರಲಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

https://pragati.taskdun.com/belagavikitturbjp-workerscongressjoin/

Home add -Advt

Related Articles

Back to top button