Latest

ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವ ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೇ ವಾಪಾಸ್ ಬೆಂಗಳೂರಿಗೆ ಬಂದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್ ಠಾಣೆ ಉದ್ಘಾಟನೆಗೆಂದು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ತೆರಳಿದ್ದರು. ಸಚಿವರ ವಿಮಾನ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿತ್ತು. ಬಳಿಕ ಸಚಿವರು ಅಲ್ಲಿಂದ ರಸ್ತೆ ಮಾರ್ಗವಾಗಿ ಸೊರಬ ತಾಲೂಕಿಗೆ ತೆರಳುವವರಿದ್ದರು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಗೃಹ ಸಚಿವರ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗಿಲ್ಲ.

ಕೆಲ ಕಾಲ ಹಾರಾಟ ನಡೆಸಿದರೂ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದೇ ಬೆಂಗಳೂರಿಗೆ ವಿಮಾನ ವಾಪಾಸ್ ಆಗಿದೆ. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಗೃಹ ಸಚಿವ ಪರಮೇಶ್ವರ್ ಬರಬೇಕಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದೇ ಬೆಂಗಳೂರಿಗೆ ವಾಪಾಸ್ ಆಗಿದೆ ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button