Belagavi NewsBelgaum NewsPolitics

*ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಲಾಠಿ ಚಾರ್ಜ್: ಗೃಹ ಸಚಿವರ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಕ್ರಮ ಖಂಡಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಇದರಿಂದಾಗಿ ಉಭಯಸದನಗಳ ಕಲಾಪದಲ್ಲಿ ಗದ್ದಲ ನಡೆದ ಘಟನೆ ನಡೆದಿದೆ. ಈವೇಳೆ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಂಚಮಸಾಲಿ ಸಮುದಾಯದ ಮುಖಂಡರಿಗೆ ಶಾಂತಿಯುತ ಪ್ರತಿಭಟನೆಗೆ ಸೂಚಿಸಲಾಗಿತ್ತು. ಅಲ್ಲದೇಟ್ರ್ಯಾಕ್ಟರ್ ತರದಂತೆ ಸೂಚಿಸಲಾಗಿತ್ತು. ಆದಾಗ್ಯೂ 20 ಟ್ರ್ಯಾಕ್ಟರ್ ಗಳನ್ನು ತಂದಿದ್ದಾರೆ.

ಶಾಂತಿಯುತ ಹೋರಾಟ ಬಿಟ್ಟು ಸುವರ್ಣಸೌಧಕ್ಕೆ ಟ್ರ್ಯಾಕ್ಟರ್ ನುಗ್ಗಿಸಲು ಯತ್ನಿಸಿದ್ದಾರೆ. ಹೈ ಕೋರ್ಟ್ ಆದೇಶವನ್ನು ಉಲ್ಲಂಘಿಸಲು ಮುಂದಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಶಾಂತಿ ಸುವ್ಯವಸ್ಥೆ ಕಾಪಾಡುವ ನಿತ್ಟಿನಲ್ಲಿ ಪೊಲೀಸರು ಅನಿವಾರ್ಯವಾಗಿ ಲಘುಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button