EducationKannada NewsKarnataka NewsLatestSports

*ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ನಲ್ಲಿ ಪ್ರಥಮ ಸ್ಥಾನ ಪಡೆದ ಚಂದನಾ ಮೇಸ್ತ್ರಿ*

ರಾಷ್ಟ್ರಮಟ್ಟದ 67ನೇ ಟೆಬಲ್ ಟೆನ್ನಿಸ್ ಚಾಂಪಿಯನ್ ಶಿಪ್ ಗೆ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಶಿರಸಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಶಿರಸಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಡಿಪಾರ್ಟ್ ಮೆಂಟಲ್ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಚಂದನಾ ಶಶಿಕಾಂತ ಮೇಸ್ತ್ರಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಚಂದನಾ ಮೇಸ್ತ್ರಿ …ಹೈಸ್ಕೂಲು ವಿದ್ಯಾರ್ಥಿನಿಯಾಗಿದ್ದು, ರಾಜ್ಯದ 35 ಜಿಲ್ಲೆಯ ಸ್ಪರ್ಧಿಗಳನ್ನು ಸೋಲಿಸಿ ರಾಜ್ಯಕ್ಕೆ ಪ್ರಥಮ ಬಂದಿದ್ದು, 17 ವರ್ಷದೊಳಗಿನ ರಾಷ್ಟ್ರಮಟ್ಟದ 67ನೇ ಟೆಬಲ್ ಟೆನ್ನಿಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಂದನಾಳನ್ನು ಸನ್ಮಾನಿಸಿ, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರು.

ಇದೇ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ಚಂದನಾಳಿಗೆ ರಾಷ್ಟ್ರಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.


Related Articles

Back to top button