ಪ್ರಗತಿವಾಹಿನಿ ಸುದ್ದಿ; ತುಮಕೂರು: ಪೊಲೀಸ್ ಇಲಾಖೆಯಲ್ಲಿ ಪತಿ-ಪತ್ನಿ ಹಾಗೂ ಅಂತರ್ ಜಿಲ್ಲಾ ವಾರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಗೂ ವರ್ಗಾವಣೆ 7 ವರ್ಷದಿಂದ 3 ವರ್ಷಕ್ಕೆ ಇಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ವರ್ಷದ ವರ್ಗಾವಣೆಯಲ್ಲಿ ಇದ್ಯಾವುದನ್ನೂ ಪರಿಗಣನೆಗೆ ತೆಗೆದುಕೊಂಡಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಮುಂದುನ ವರ್ಷ ಅನೇಕ ಬದಲಾವಣೆಗಳನ್ನು ತರಲಾಗುವುದು ಎಂದರು.
ಮುಂದಿನ ವರ್ಷ ಪೊಲೀಸ್ ಆಕ್ಟ್ ನಲ್ಲಿ ಬದಲಾವಣೆ ತರಲಾಗುವುದು. ಅದರ ಜೊತೆಗೆ ವರ್ಗಾವಣೆ ಪದ್ಧತಿಯಲ್ಲಿಯೂ ಕೆಲ ಬದಲಾವಣೆ ಮಾಡಲಾಗುವುದು. ಪೊಲೀಸರು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಾರೆ 12-18 ಗಂಟೆಗಳ ಕಾಲ, ಕೆಲಸಮಯದಲ್ಲಿ 24 ಗಂಟೆಯೂ ಕೆಲಸ ಮಡುತ್ತಾರೆ. ಹಾಗಾಗಿ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ಕಾನೂನಿನಲ್ಲಿ ಕೆಲ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ