
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕಲೆಕ್ಷನ್ ಗೆ ರಾಜ್ಯಕ್ಕೆ ಬಂದಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಕಿಡಿಕಾರಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾರ್ಯದರ್ಶಿಗಳು ಅದನ್ನೇ ಮಾಡಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಪರಮೇಶ್ವರ್, ಕಲೆಕ್ಷನ್ ಅಂದ್ರೆ ಏನು? ಹೆಗಲ ಮೇಲೆ ಬ್ಯಾಗ್ ಹೊತ್ಕೊಂಡು ಹೋಗ್ತಾರಾ? ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದರು. ಅವರು ಅದನ್ನೇ ಮಾಡಿದ್ರಾ? ಎಂದು ಕೇಳಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಕಲೆಕ್ಷನ್ ಮಾಡ್ತಿದ್ದರು ಎಂದು ನಾವು ಹೇಳಬೇಕಾಗುತ್ತದೆ. ಅನಗತ್ಯವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದನ್ನು ಮೊದಲು ನಿಲ್ಲಿಸಲಿ ಎಂದು ಗುಡುಗಿದ್ದಾರೆ.