Latest

*ಕಪ್ ಎಲ್ಲ ಅವರದ್ದೇ ಆದ್ರೆ ಸರ್ಕಾರ ಮಾತ್ರ ನಮ್ಮದು; ಸಚಿವ ಆರ್.ಅಶೋಕ್ ಗೆ ತಿರುಗೇಟು ನೀಡಿದ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾನೋತ್ತರ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಮೇಲುಗೈ ಎಂಬ ವರದಿ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಬಾರಿ ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ. 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ನಾವು ಸರ್ಕಾರ ರಚನೆ ಮಡುವುದು ಖಚಿತ ಎಂದು ತಿಳಿಸಿದ್ದಾರೆ.

ಇದೇ ವೇಳೆ ಈ ಬಾರಿ ಕಪ್ ನಮ್ಮದೇ ಎಂದು ಹೇಳುವ ಮೂಲಕ ಸಚಿವ ಆರ್.ಅಶೋಕ್, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಕಪ್ ಎಲ್ಲಾ ಅವರದ್ದೇ ಆದರೆ ಸರ್ಕಾರ ಮಾತ್ರ ಕಾಂಗ್ರೆಸ್ ನದ್ದು ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

https://pragati.taskdun.com/vidhanasabha-electionbettingtumakuru/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button