ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖ್ಯಾತ ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ ಅವರ ಆಯುರ್ವೇದ ಜ್ಞಾನ ಯಾನ – ೧೬ ಪುಸ್ತಕಗಳ ಸರಣಿಯ ಏಳನೇ ಕೃತಿಯಾದ ಸಂಸ್ಕಾರ ರಸ ವೈವಿಧ್ಯ ಸವಿ ಭೋಜನ ಪುಸ್ತಕವು ಸೆ.೧೧ರಂದು ಬೆಳಗ್ಗೆ ೧೧ ಗಂಟೆಗೆ ಬೆಳಗಾವಿಯ ಶಹಾಪುರದಲ್ಲಿರುವ ಕೆಎಲ್ಇ ಶ್ರೀ ಬಿ. ಎಂ. ಕಂಕನವಾಡಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬಿಡುಗಡೆಗೊಳ್ಳಲಿದೆ.
ಮಾಜಿ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಕಾಹೆರ್) ರೆಜಿಸ್ಟ್ರಾರ್ ಪ್ರೊ. ಡಾ.ವಿ.ಎ. ಕೋಟಿವಾಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಎಲ್ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ವಿಧಾನ ಪರಿಷತ್ನ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ, ಖಾನಾಪುರದ ಮಾಜಿ ಶಾಸಕ ಅರವಿಂದ ಸಿ. ಪಾಟೀಲ, ಕೆಎಲ್ಇ ಶ್ರೀ ಬಿ. ಎಂ. ಕಂಕನವಾಡಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುಹಾಸ ಶೆಟ್ಟಿ, ಎಸ್ಬಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಡಿವೇಶ ಅರಕೇರಿ, ಡಾ. ರವಿ ಪಾಟೀಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ. ಕಿರಣ ಖೋತ್ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸೆಲ್ಕೋ ಸೋಲಾರ್ನ ಸಿಇಒ ಮೋಹನ ಭಾಸ್ಕರ ಹೆಗಡೆ ಅವರಿಂದ ಪ್ರವೇಶಿಕೆ ಹಾಗೂ ಕೃತಿಕಾರ ಡಾ. ಗಿರಿಧರ ಕಜೆ ಅವರಿಂದ ಆಶಯ ನುಡಿ ಪ್ರಸ್ತುತಗೊಳ್ಳಲಿದೆ.
ಆಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಡಾ.ಗಿರಿಧರ ಕಜೆ ಕೋರಿದ್ದಾರೆ.
https://pragati.taskdun.com/world/neerajchopra-olympic-goldmedal-winner-thefirst-dimond-trophy/
https://pragati.taskdun.com/latest/kle-ayurprabhakar-korebelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ