
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ ಎರಡನೇ ಅಲೆ ನಿರ್ವಹಣೆಯಲ್ಲಿ ವಿಫಲ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಖಾತೆಯ ಇಬ್ಬರು ಸಚಿವರ ತಲೆದಂಡವಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಹಾಗೂ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಚೌಬೆ ಇಬ್ಬರಿಗೂ ಕೊಕ್ ನೀಡಲಾಗಿದೆ.
ಕೋವಿಡ್ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ಕೊರತೆ ಕಾರಣಕ್ಕೆ ಆರೋಗ್ಯ ಸಚಿವರಾಗಿದ್ದ ಡಾ.ಹರ್ಷವರ್ಧನ್ ಹಾಗೂ ಅಶ್ವಿನ್ ಚೌಬೆ ರಾಜೀನಾಮೆ ಪಡೆಯಲಾಗಿದೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಡಿ.ವಿ.ಸದಾನಂದಗೌಡ, ರಮೇಶ್ ಪೋಖ್ರಿಯಾಲ್ ಸೇರಿದಂತೆ ಈವರೆಗೂ ಒಟ್ಟು 9 ಸಚಿವರು ರಾಜೀನಾಮೆ ನೀಡೀದ್ದಾರೆ.
ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ