Latest

ಆಸ್ಪತ್ರೆಗೆ ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಾಗಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ ಸುಧಾಕರ್, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದಿದ್ದಾರೆ.

Home add -Advt

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದರು.

Related Articles

Back to top button