ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ನಡುವೆ ಆತಂರಿಕ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಹಿನ್ನಲೆಯಲ್ಲಿ ಸ್ಪಷ್ಟನೆ ನಿಡಿರುವ ಸಚಿವ ಸುಧಾಕರ್, ನನ್ನ ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಇದು ಸುಳ್ಳು ಸುದ್ದಿ ಎಂದಿದ್ದಾರೆ.

ನಾವಿಬ್ಬರೂ ಕೊರೊನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅವರು ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ.

Home add -Advt

ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮ್ಮದೇ ಆದ ಜವಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.

Related Articles

Back to top button