
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿನ್ನೆ ವಿಧಿವಶರಾಗಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ.ಚಿದಾನಂದಮೂರ್ತಿಯವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಬೆಳಿಗ್ಗೆ 11 ಗಂಟೆಗೆ ಸುಮನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಸಂಪ್ರದಾಯದಂತೆ ಚಿಮೂ ಅವರ ಅಂತ್ಯಸಂಸ್ಕಾರ ನೆರವೇರಿದೆ. ಚಿಮೂ ಅವರ ಆಸೆಗಳಿಗೆ ಧಕ್ಕೆಯಾಗಬಾರದೆಂದು ಪಾರ್ಥಿವ ಶರೀರಕ್ಕೆ ಯಾವುದೇ ಪೂಜೆ-ಪುನಸ್ಕಾರ ನೆರವೇರಿಸಿಲ್ಲ.
ಅಂತ್ಯಕ್ರಿಯೆಯಲ್ಲಿ ಕುಟುಂಬ ಸದಸ್ಯರು, ಸಿಎಂ ಬಿ ಎಸ್ ಯಡಿಯೂರಪ್ಪ, ಸಚಿವ ವಿ.ಸೋಮಣ್ನ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು..
ಚಿದಾನಂದಮೂರ್ತಿ 1931 ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಳೂರ್ನಲ್ಲಿ ಜನಿಸಿದ್ದರು. ಚಿದಾನಂದಮೂರ್ತಿಯವರಿಗೆ 88 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ