ಪ್ರಗತಿವಾಹಿನಿ ಸುದ್ದಿ: ಉತ್ತರಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಂಸದರಾಗಿದ್ದ ಡಾ.ಎಂ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಪುತ್ರ ವೆಂಕಟೇಶ್, ಪುತ್ರಿಯರು, ಸಹೋದರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಅಪಾರ ಸಂಖ್ಯೆಯ ಬಂಧುಬಳಗವನ್ನು ಅಗಲಿದ್ದಾರೆ.
ಜಯನಗರದ 7ನೇ ಬ್ಲಾಕ್ ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ನಾಳೆ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಉತ್ತರ ಹಳ್ಳಿ ಬಳಿಯ ಆರ್ ಎಂಎಸ್ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಶ ಕಲ್ಪಿಸಲಾಗುತ್ತಿದೆ. ಬಳಿಕ ಉತರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಡಾ.ಎಂ.ಶ್ರೀನಿವಾಸ್ ಅವರ ನಿಧನಕ್ಕೆ ರಾಜಕೀಯ ನಾಕರು, ಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ