*ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಗೆ ಅಂತಿಮ ಸಿದ್ಧತೆ: ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿರುವ ನಿಗಮಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ನಡೆಯಲಿದ್ದು, ಈಗಾಗಲೇ ಅಂತಿಮ ಯಾತ್ರೆಯ ಸಿದ್ಧತೆ ನಡೆಸಲಾಗಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಸಚಿವರು, ಕಾಂಗ್ರೆಸ್ ವರಿಷ್ಠರು ಸೇರಿದಂತೆ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ. ನಿನ್ನೆಯಿಂದ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿತ್ತು. ಅವರ ಅಂತಿಮ ಯಾತ್ರೆ ಆರಂಭವಾಗಿ ಎಐಸಿಸಿ ಕಚೇರಿ ತಲುಪಿದ್ದು, ಅಲ್ಲಿಂದ ನಿಗಮ ಬೋದ್ ಘಾಟ್ ಗೆ ಅಂತಿಮ ಯಾತ್ರೆ ಮೆರವಣಿಗೆ ಆರಂಭವಾಗಿದೆ.
ದೇಶದ ಗಣ್ಯಾತಿಗಣ್ಯರು ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಎಲ್ಲಾಕಡೆಯಿಂದ ಶೋಕ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ