National

*ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಹರಿಕಾರ ಇನ್ನು ನೆನಪು ಮಾತ್ರ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಭಾರತದ ಆರ್ಥಿಕ ಕ್ರಾಂತಿ ಹರಿಕಾರ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ದೆಹಲಿಯ ನಿಗಮ್ ಬೋದ್ ಘಾಟ್ ಗೆ ಮೆರವಣಿಗೆ ಮೂಲಕವಾಗಿ ಆಗಮಿಸಿದ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ , ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಡೆದರು.

Home add -Advt

ಮನಮೋಹನ್ ಸಿಂಗ್ ಅವರ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ದರ್ಶನ ಪಡೆದರು. ಬಳಿಕ ಸಿಖ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಬಳಿಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಬಳಿಕ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಚಿತೆಯ ಮೇಲಿಟ್ಟು ಅಗ್ನಿಸ್ಪರ್ಶ ಮಾಡಲಾಯಿತು. ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನರಾದರು. ಅಭಿವೃದ್ಧಿ ಹರಿಕಾರ ಮನಮೋಹನ್ ಸಿಂಗ್ ಇನ್ನು ನೆನಪು ಮಾತ್ರ.

Related Articles

Back to top button