
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ವತಿಯಿಂದ ನೀಡಲಾಗುವ ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಲಭಿಸಿದೆ. ಸೋಮವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ, ನಾಡಿನ ಹಿರಿಯ ರಾಜಕಾರಣ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ, ಕೆಂಗಲ್ ಹನುಮಂತಯ್ಯನವರ ಹೆಸರಿನ ಸಂಸ್ಕೃತಿ ದತ್ತಿ ಪ್ರಶಸ್ತಿಯೊಂದನ್ನು ಸ್ಥಾಪಿಸಲಾಗಿದೆ.
೨೦೨೦ನೇ ಸಾಲಿಗೆ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಪ್ರಭಾಕರ ಬ. ಕೋರೆ ಅವರು ಭಾಜನರಾಗಿದ್ದಾರೆ.
ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಬೆಳಗಾವಿ ಲಿಂಗರಾಜು ಕಾಲೇಜು ಆವರಣದಲ್ಲಿ ಸಮಾರಂಭವನ್ನು ಏರ್ಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ