
ಪ್ರಗತಿವಾಹಿನಿ ಸುದ್ದಿ, ವಾಷಿಂಗ್ಟನ್ : ಇತ್ತೀಚಿಗೆ ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರು ಅಮೆರಿಕ ದೇಶಕ್ಕೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ರಾದ ಡೊನಾಲ್ಡ್ ಟ್ರಂಪ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು.
ಉದ್ಯಮಿ ರವಿಶಂಕರ್ ಭೂಪಲಾಪೂರ್ ದಂಪತಿಗಳ ಮಗಳಾದ ಡಾ. ಮನಾಲಿ ಮತ್ತು ಅಂಕಿತ್ ಅವರ ಮದುವೆಯ ಸಮಾರಂಭದಲ್ಲಿ ಟ್ರಂಪ್ ಅವರನ್ನು ಭೇಟಿಯಾದರು.
ಕುಶಲೋಪಹರಿಯಾಗಿ ಟ್ರಂಪ್ ಅವರೊಂದಿಗೆ ಮಾತನಾಡಿದ ಡಾ. ಕೋರೆ ಅವರು, ಪ್ರಸ್ತುತ ಜಾಗತಿಕ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳ ಕುರಿತು ವಿಚಾರಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ರೊಟೇರಿಯನ್ ರವಿಶಂಕರ್ ಭೂಪಲಾಪೂರ್ ಅವರು ಜೊತೆಗಿದ್ದರು.
`ಪ್ರಗತಿ ಮೀಡಿಯಾ ಹೌಸ್’ ನಿಂದ ಮತ್ತೊಂದು ಕೊಡುಗೆ: ಇಂಗ್ಲೀಷ್ ನ್ಯೂಸ್ ಪೋರ್ಟಲ್ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ