Belagavi NewsBelgaum NewsKannada NewsKarnataka NewsLatest

*ಎನ್. ತಿಪ್ಪಣ್ಣ ನಿಧನಕ್ಕೆ ಡಾ.ಪ್ರಭಾಕರ ಕೋರೆ ಶೋಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ವಿಧಾನ ಪರಿಷತ್ ಸದಸ್ಯರು, ವಿಧಾನ ಪರಿಷತ್ ಸಭಾಧ್ಯಕ್ಷರು, ಮಾಜಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರಾಗಿದ್ದ ಡಾ.ಎನ್.ತಿಪ್ಪಣ್ಣನವರ (97) ಅಗಲಿಕೆ ಸಮಾಜಕ್ಕೆ ತುಂಬಲಾರದ ದುಃಖವನ್ನುಂಟುಮಾಡಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟಿçÃಯ ಉಪಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಶೋಕ ವ್ಯಕ್ತಪಡಿಸಿದ್ದಾರೆ.
ಎನ್.ತಿಪ್ಪಣ್ಣ ಅವರು ಸಮಾಜದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಬಸವಣ್ಣವರ ನಿಜವಾದ ಅನುಯಾಯಿಗಳಾಗಿ, ಶರಣ ತತ್ವ ನಿಜವಾದ ಪ್ರತಿಪಾಧಕರಾಗಿದ್ದರು.  ದೂರದೃಷ್ಟಿಯಿಂದ ವೀರಶೈವ ಲಿಂಗಾಯತ  ಸಮಾಜಕ್ಕೆ ತಮ್ಮ ಶಕ್ತಿ ಮೀರಿ ಶ್ರಮಿಸಿದರು. ಇಳಿ ವಯಸ್ಸಿನಲ್ಲಿಯೂ ಅವರ ಸಮಾಜದ ಬಗ್ಗೆ ಹೊಂದಿದ್ದ ಕಳಕಳಿ ಕಾಳಜಿಗಳು ಅಪಾರವಾಗಿತ್ತು. ಮುತ್ಸದ್ದಿ ರಾಜಕಾರಣಿಯೂ ಆಗಿದ್ದ ಅವರು ಇಂದಿನ ಯುವಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ. ಅವರು  ಲಿಂಗೈಕ್ಯರಾಗಿರುವುದು ಸಮಸ್ತ ನಾಡಿಗೆ ಹಾಗೂ  ಸಮಾಜಕ್ಕೆ ತುಂಬಲಾರದನಷ್ಟವುAಟು ಮಾಡಿದೆ ಎಂದು ಡಾ.ಕೋರೆಯವರು ದುಃಖ ವ್ಯಕ್ತಪಡಿಸಿದ್ದಾರೆ.


ಬೆಳಗಾವಿಯ ಮಹಾಸಭೆಯಲ್ಲಿ ಶ್ರದ್ಧಾಂಜಲಿ: ಬೆಳಗಾವಿ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷತೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಅವರು ಮಹಾಸಭೆಯಲ್ಲಿ ಶ್ರದ್ಧಾಂಜಲಿಯನ್ನು ಹಮ್ಮಿಕೊಂಡು, ಅಪ್ಪಟ್ಟ ಬಸವ ಅನುಯಾಯಿಗಳಾಗಿದ್ದ ತಿಪ್ಪಣ್ಣನವರು ಮಹಾಸಭೆಯನ್ನು ಕ್ರಿಯಾಶೀಲವಾಗಿ ಹಾಗೂ ರಚನಾತ್ಮಕವಾಗಿ ಕಟ್ಟಿಬೆಳೆಸಿದರು. ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ಮಹಾಸಭೆಯ ಧ್ಯೇಯೋದ್ದೇಶಗಳನ್ನು ಅನುಷ್ಠಾನಕ್ಕೆ ತಂದರು. ಅವರ ಪಾದರಸದ ವ್ಯಕ್ತಿತ್ವದಿಂದ ಮಹಾಸಭೆಯು ನಾಡಿನಾದ್ಯಂತ ಅನೇಕ ಸಮಾಜಮುಖಿ ಕೆಲಸಗಳನ್ನು ಕೈಗೊಂಡಿದ್ದು ಸರ್ವವಿಧಿತ. ಅವರ ಅಗಲಿಕೆ ವೀರಶೈವ ಲಿಂಗಾಯತ ಸಮಾಜವನ್ನು ಬಡವಾಗಿಸಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾಸಭೆಯ ಸಮಸ್ತ ಪದಾಧಿಕಾರಿಗಳು ಎನ್.ತಿಪ್ಪಣ್ಣನವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಿತು. ಸೃಷ್ಟಿಕರ್ತ ಭಗವಂತನು ಅವರ ದಿವ್ಯಾತ್ಮಕ್ಕೆ ಶಾಂತಿಯನ್ನು ಕರುಣಿಸಲೆಂದು, ಅವರ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸಿದರು.

ಸಚಿವ ಈಶ್ವರ ಬಿ ಖಂಡ್ರೆ ಸಂತಾಪ

Home add -Advt

ಮಾಜಿ ಉಪ ಸಭಾಪತಿಗಳೂ, ಹಿರಿಯ ವಕೀಲರೂ, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರೂ ಆದ ಡಾ. ಎನ್. ತಿಪ್ಪಣ್ಣ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದ ತಿಪ್ಪಣ್ಣನವರು ತಮ್ಮ ತಂದೆ ಶತಾಯುಷಿ ಶ್ರೀ ಭೀಮಣ್ಣ ಖಂಡ್ರೆ ಅವರೊಂದಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ್ದರು, ಬಸವಾದಿ ಪ್ರಮಥರ ತತ್ವಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಪಾಲಿಸುತ್ತಿದ್ದ ಅವರು ಸಾವಿರಾರು ವಿದ್ಯಾರ್ಥಿಗಳ ಅನ್ನ ದಾಸೋಹ, ಜ್ಞಾನ ದಾಸೋಹಕ್ಕೆ ನೆರವಾಗಿದ್ದರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ನ್ಯಾಯವಾದಿಗಳಾಗಿ, ಸಾರ್ವಜನಿಕ  ಅಭಿಯೋಜಕರಾಗಿ, ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ, ವಿಧಾನಪರಿಷತ್ ಸದಸ್ಯರಾಗಿ, ಉಪ ಸಭಾಪತಿಗಳಾಗಿ ನಾನಾ ಕ್ಷೇತ್ರದಲ್ಲಿ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಅನುಪಮವಾದ್ದು. ಎಲ್ಲ ಕ್ಷೇತ್ರದಲ್ಲೂ ಅವರು ತಮ್ಮದೇ ಛಾಪು ಮೂಡಿಸಿದ್ದರು ಎಂದು ತಿಳಿಸಿದ್ದಾರೆ. 

 ಸರಳ ಸಜ್ಜನಿಕೆಯ ಸಾಕಾರ ಮೂರ್ತಿಗಳಾಗಿದ್ದ ತಿಪ್ಪಣ್ಣನವರ ಆತ್ಮಕ್ಕೆ ಈಶ್ವರ ಚಿರಶಾಂತಿ ನೀಡಲಿ,  ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಂಧು ಮಿತ್ರರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಈಶ್ವರ ಖಂಡ್ರೆ ಸಂತಾಪದಲ್ಲಿ ತಿಳಿಸಿದ್ದಾರೆ.

ಎನ್. ತಿಪ್ಪಣ್ಣ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

ವಿಧಾನಪರಿಷತ್ ಮಾಜಿ ಸದಸ್ಯರು ಹಾಗೂ ಮಾಜಿ ಸಭಾಧ್ಯಕರು ಆಗಿದ್ದ ಡಾ. ಎನ್. ತಿಪ್ಪಣ್ಣ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಖವುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. 

ಈ ಕುರಿತು ಎಕ್ಸ್ ಮಾಡಿರುವ ಅವರು, ಹಿರಿಯ ನ್ಯಾಯವಾದಿಯಾಗಿ, ಬಳ್ಳಾರಿ ವಿ. ವಿ ಸಂಘದ ಮಾಜಿ ಅಧ್ಯಕ್ಷರಾಗಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯದಕ್ಷರಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ದೂರದೃಷ್ಠಿ ಉಳ್ಳವರಾಗಿದ್ದ ಅವರು ಬಳ್ಳಾರಿ ವಿ ವಿ ಸಂಘದ ಮೂಲಕ ಅನೇಕ ಶಾಲೆ ಕಾಲೇಜು ಪ್ರಾರಂಭಿಸಿ ಶಿಕ್ಷಣಾಭಿರುದ್ದಿಗೆ ತಮ್ಮದೇ ಆದ ಕೊಡುಗೆ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ. 

ಅವರ ಅಗಲಿಕೆಯಿಂದ ಸಮಾಜ ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Related Articles

Back to top button