Kannada NewsKarnataka NewsLatest

*ರಣಬಿಸಿಲ ನಡುವೆ ಕೆಲವೆಡೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಿಸಿಗಾಳಿ ಬೀಸುತ್ತಿದೆ. ಇನ್ನೊಂದೆಡೆ ರಾಜ್ಯದ ಉತರ ಒಳನಾಡಿನ ಕೆಲವೆಡೆಗಳಲ್ಲಿ ಮಳೆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿ, ಕಲಬುರ್ಗಿ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಆದರೆ ಈವರೆಗೂ ಮಳೆಯ ಸುಳಿವಿಲ್ಲ.

ಕಲಬುರ್ಗಿಯಲ್ಲಿ ಅತಿ ಹೆಚ್ಚು 43.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ರಾತ್ರಿ ವೇಳೆಯಲ್ಲಿಯೂ ಬಿಸಿ ವಾತಾವರಣವಿರಲಿದೆ ಎಂದು ತಿಳಿಸಿದೆ.


Related Articles

Back to top button