Latest

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರಿಗೆ 2018ರಲ್ಲಿ ಡಾ.ನೀರಜ್ ಜೊತೆಗೆ ವಿವಾಹವಾಗಿದ್ದು ಒಂದು ಮಗು ಕೂಡ ಇದೆ. ವಸಂತನಗರದ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳು ಆತ್ಮಹತ್ಯೆಗೆ ಶರಣಾದವರು. ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆದಿದೆ.

ಪತಿ ಡಾ.ನೀರಜ್ 8 ಗಂಟೆಗೆ ಕರ್ತವ್ಯಕ್ಕೆ ತೆರಳಿದ್ದಾರೆ. ನಂತರ ಮನೆಯ ಕೆಲಸದವರು ಕರೆದರೂ ಸೌಂದರ್ಯ ಕೊಠಡಿಯ ಬಾಗಿಲು ತೆರೆಯದ್ದರಿಂದ ಅವರು ನೀರಜ್ ಗೆ ಕಾಲ್ ಮಾಡಿದ್ದಾರೆ. ಪತಿ ಬಂದು 10 ಗಂಟೆಗೆ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮೊದಲಾದವರು ಯಡಿಯೂರಪ್ಪ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ.

12 ಬಿಜೆಪಿ ಶಾಸಕರು ಸಸ್ಪೆಂಡ್; ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

Related Articles

Back to top button