Belagavi NewsBelgaum NewsKarnataka NewsLatest

*ಡಾ.ಸರಜೂ ಕಾಟ್ಕರ್ ಅವರಿಗೆ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’*

ಬೆಂಗಳೂರು ಜುಲೈ ೨೯:

ಪ್ರಗತಿವಾಹಿನಿ ಸುದ್ದಿ: ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡುವ ಅತ್ಯಂತ ಪ್ರತಿಷ್ಟಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಬೆಳಗಾವಿಯ ಸಾಹಿತಿ ಮತ್ತು ಪತ್ರಕರ್ತ ಡಾ ಸರಜೂ ಕಾಟ್ಕರ್ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ರೂ 7 ಲಕ್ಷ ನಗದು ಹಾಗೂ ಶಾಲು ಸನ್ಮಾನ ಒಳಗೊಂಡಿರುತ್ತದೆ.ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಮತ್ತು ಮೌಲಿಕವಾದ ಕೊಡುಗೆ ನೀಡಿದ ಲೇಖಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

‘ನೃಪತುಂಗ ಸಾಹಿತ್ಯ ಪ್ರಶಸ್ತಿಯು ಕನ್ನಡ ಸಾಹಿತ್ಯದ ಅತ್ಯುಚ್ಛ ಪ್ರಶಸ್ತಿಯೆಂದು ಗಣಿಸಲ್ಪಡುತ್ತದೆ.

Home add -Advt

ಡಾ ಸರಜೂ ಕಾಟ್ಕರ್ ಅವರು 80 ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ವೈಚಾರಿಕ ಸಾಹಿತ್ಯ, ನಾಟಕ, ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಮರಾಠಿ, ಹಿಂದಿ , ಇಂಗ್ಲಿಷ್ ಭಾಷೆಗಳಲ್ಲಿದ್ದ ಅತ್ಯುತ್ತಮವಾದ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಬರೆಹಗಳನ್ನು ಕನ್ನಡಕ್ಕೆ ತಂದಿದ್ದಾರೆ.

ಅವರ 5 ಕಾದಂಬರಿಗಳು ಚಲನಚಿತ್ರಗಳಾಗಿ ರಾಜ್ಯ , ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿವೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಡಾ ಬಾಬು ಜಗಜೀವನರಾಮ್ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, , ಕರ್ನಾಟಕ ಮಿಡಿಯಾ ಅಕಾಡೆಮಿ ಪ್ರಶಸ್ತಿ, ಸಂಶೋಧಕ ಕುಂದಣಗಾರ ಪ್ರಶಸ್ತಿ, ಟಿಎಸ್ಆರ್ ಪತ್ರಕರ್ತ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿರುವ ಡಾ ಸರಜೂ ಕಾಟ್ಕರ್ ಅವರು ಸಧ್ಯ ಕರ್ನಾಟಕ ಸರಕಾರದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿದ್ಸಾರೆ.

ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಯವರು ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ವಿತರಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ ಎ ದಯಾನಂದ ಅವರು ಹೇಳಿದ್ದಾರೆ.

Related Articles

Back to top button